ರಿಂಗ್‌ ರಸ್ತೆಯಲ್ಲಿ ಓಡಾಡುವಾಗ ಹುಷಾರ್‌, ಬೈಕಿನಲ್ಲಿ ತೆರಳಿದ್ದ ಯುವಕ, ಯುವತಿಯಿಂದ ಕೇಸ್‌ ದಾಖಲು

ಶಿವಮೊಗ್ಗ: ವಿದ್ಯಾರ್ಥಿ ಮತ್ತು ಆತನ ಸ್ನೇಹಿತೆಗೆ (ಇಬ್ಬರ ಹೆಸರು ಗೌಪ್ಯ) ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ತೋರಿಸಿ ಚಿನ್ನದ ಸರಗಳು, ಮೊಬೈಲ್‌ ಫೋನ್‌ ಕಸಿದು ಪರಾರಿಯಾಗಿದ್ದಾರೆ. ಶಿವಮೊಗ್ಗದ ಹೊಸ ರಿಂಗ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ವಿದ್ಯಾರ್ಥಿ ಮತ್ತು ಆತನ ಸ್ನೇಹಿತೆ ಪೆಸೆಟ್‌ ಕಾಲೇಜಿನಲ್ಲಿ ನಡೆಯುತ್ತಿದ್ದ ಕ್ಯಾಂಪಸ್‌ ಸೆಲೆಕ್ಷನ್‌ಗೆ ಬೈಕಿನಲ್ಲಿ ತೆರಳುತ್ತಿದ್ದರು. ರಿಂಗ್‌ ರಸ್ತೆಯಲ್ಲಿ ಮಧ್ಯಾಹ್ನ 1.30ರ ಹೊತ್ತಿಗೆ ಬೈಕ್‌ ನಿಲ್ಲಿಸಿ ಇಬ್ಬರು ಫೋಟೊ ಕ್ಲಿಕ್ಕಿಸಿಕೊಳ್ಳೂತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿದ್ಯಾರ್ಥಿ ಮತ್ತು ಸ್ನೇಹಿತೆಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಇಬ್ಬರ ಬಳಿ ಇದ್ದ ₹50,000 ಮೌಲ್ಯದ 10 ಗ್ರಾಂ ತೂಕದ ಬಂಗಾರದ ಸರ, ₹1.20 ಲಕ್ಷ ಮೌಲ್ಯದ 20 ಗ್ರಾಂ ತೂಕದ ಬಂಗಾರದ ಸರ, ₹41,000 ಮೌಲ್ಯದ ಸ್ಯಾಮ್‌ಸಂಗ್‌ ಎಸ್23‌ ಮೊಬೈಲ್‌, ₹20,000 ಮೌಲ್ಯದ ರೆಡ್‌ಮಿ 12 ಪ್ರೋ ಮೊಬೈಲ್‌ ಫೋನ್‌ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಊರಿಗೆ ಹೋಗಿದ್ದಾಗ ಪಕ್ಕದ ಮನೆ ಮಹಿಳೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

ಬಳಿಕ ತಮ್ಮನ್ನು ಹಿಂಬಾಲಿಸಿ ಬನ್ನಿ ಮುಂದೆ ನಿಮ್ಮ ಸರ ಮತ್ತು ಮೊಬೈಲ್‌ ಫೋನ್‌ ವಾಪಸ್‌ ಕೊಡುತ್ತೇವೆ ಎಂದು ತಿಳಿಸಿದ್ದ ಇಬ್ಬರು ಅಪರಿಚಿತರು ಗೋವಿಂದಾಪುರದ ಬಳಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment