ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಬಳ್ಳಾರಿಯಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರು, ಬೆಳಗಿನ ಜಾವ ಮನೆಗೆ ನಡೆದು ಹೋಗುತ್ತಿದ್ದಾಗ, ಅಪರಿಚಿತನೊಬ್ಬ ಅಡ್ಡಗಟ್ಟಿ ನಗದು, ಉಂಗುರ ಕಸಿದು (Robbery) ಪರಾರಿಯಾಗಿದ್ದಾನೆ.
ನವುಲೆಯ ಸ್ವರ್ಣ ಮಿತ್ರ ಬಡಾವಣೆಯ ಕುಮಾರ್ ಎಂಬುವವರು ಬಳ್ಳಾರಿಯಲ್ಲಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಬೆಳಗಿನ ಜಾವ 4.30ರ ಹೊತ್ತಿಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಮನೆಗೆ ನಡೆದು ಹೋಗುತ್ತಿದ್ದರು. ಶಿವಬಸವ ನಗರದಲ್ಲಿ ತೆರಳುವಾಗ ಬೈಕ್ ನಿಲ್ಲಿಸಿಕೊಂಡಿದ್ದ ವ್ಯಕ್ತಿಯೊಬ್ಬ ಕುಮಾರ್ ಅವರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿದಾನೆ ಎಂದು ಆರೋಪಿಸಲಾಗಿದೆ.
ಕುಮಾರ್ ಅವರ ಜೇಬಿನಲ್ಲಿದ್ದ ₹800 ನಗದು, ₹40,000 ಮೌಲ್ಯದ 10 ಗ್ರಾಂ ತೂಕದ ಚಿನ್ನದ ಉಂಗುರ ಕಸಿದು ಬೈಕಿನಲ್ಲಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು
Robbery


