ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 7 OCTOBER 2024 : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ (Rowdy) ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಬೀಬುಲ್ಲಾನ ಬಲಗಾಲಿನ ಪಾದಕ್ಕೆ ಗುಂಡು ತಗುಲಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















