BREAKING NEWS | ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

SHIMOGA NEWS, 7 OCTOBER 2024 : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ (Rowdy) ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಬೀಬುಲ್ಲಾನ ಬಲಗಾಲಿನ ಪಾದಕ್ಕೆ ಗುಂಡು ತಗುಲಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ

Leave a Comment