| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ (Rowdy Sheeter) ಭವಿತ್ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ ⇒ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್ ಪತ್ತೆ, ರೆಕಾರ್ಡ್ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್
ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಮತ್ತು ಇತರೆ ಇಬ್ಬರು ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳ ಹುಡುಕಾಟ ನಡೆಯುತ್ತಿತ್ತು. ರೌಡಿ ಶೀಟರ್ ಭವಿತ್ ಕುರಿತು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ತೆರಳಿದ್ದಾಗ ಆತ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್‌ಐ ಸುನಿಲ್ ಅವರು ಭವಿತ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
![]()
ಗಾಯಾಳು ಪೊಲೀಸ್ ಸಿಬ್ಬಂದಿ ಮತ್ತು ರೌಡಿ ಶೀಟರ್ ಭವಿತ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭವಿತ್ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್. ಆತನ ವಿರುದ್ಧ ಕೊಲೆ ಪ್ರಕರಣ, ಕೊಲೆ ಯತ್ನ, ರಾಬರಿ ಸೇರಿ ಒಟ್ಟು ಏಳು ಪ್ರಕರಣಗಳಿವೆ. ವಿನೋಬಗರ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಇದನ್ನೂ ಓದಿ ⇒ ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()