BREAKING NEWS – ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆಗೆ ಯತ್ನ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌

SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್‌ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್‌ (Rowdy Sheeter) ಭವಿತ್‌ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ ⇒  ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌

ಕಳೆದ ರಾತ್ರಿ ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭವಿತ್‌ ಮತ್ತು ಇತರೆ ಇಬ್ಬರು ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳ ಹುಡುಕಾಟ ನಡೆಯುತ್ತಿತ್ತು. ರೌಡಿ ಶೀಟರ್‌ ಭವಿತ್‌ ಕುರಿತು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ತೆರಳಿದ್ದಾಗ ಆತ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್‌ಐ ಸುನಿಲ್‌ ಅವರು ಭವಿತ್‌ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Doddapete-Police-raid-on-Lodge-in-Shimoga.

ಗಾಯಾಳು ಪೊಲೀಸ್‌ ಸಿಬ್ಬಂದಿ ಮತ್ತು ರೌಡಿ ಶೀಟರ್‌ ಭವಿತ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭವಿತ್‌ ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌. ಆತನ ವಿರುದ್ಧ ಕೊಲೆ ಪ್ರಕರಣ, ಕೊಲೆ ಯತ್ನ, ರಾಬರಿ ಸೇರಿ ಒಟ್ಟು ಏಳು ಪ್ರಕರಣಗಳಿವೆ. ವಿನೋಬಗರ ಠಾಣೆ ವ್ಯಾಪ್ತಿಯಲ್ಲಿ ಭವಿತ್‌ ಕಾಲಿಗೆ ಗುಂಡು ಹಾರಿಸಲಾಗಿದೆ.

ಇದನ್ನೂ ಓದಿ ⇒ ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ

Leave a Comment