ಶಿವಮೊಗ್ಗದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ, ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

120626 Rowdy Sheeter Narasimha Case

ಗುರುತು ಸಿಗದಂತೆ ದಾಳಿ

ನರಸಿಂಹನ ಮೇಲೆ ಮನಸೋಯಿಚ್ಛೆ ದಾಳಿ ನಡೆಸಲಾಗಿದೆ. ಆತನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ದಾಳಿಯ ಭೀಕರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!