SHIVAMOGGA LIVE NEWS | 24 JUNE 2024 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
SAGARA : ಪೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ 23 ವರ್ಷದ ಯುವತಿಗೆ ವಂಚಿಸಿರುವ ಆರೋಪದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆಯನ್ನು ಸಾಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಳು. ಇನ್ಸ್‌ಪೆಕ್ಟರ್ ಭರತ್ ಕುಮಾರ್ ನೇತೃತ್ವದ ತಂಡ ಸಾಗರಕ್ಕೆ ತೆರಳಿ ಮನೆಯಲ್ಲಿದ್ದ ಅರುಣ್ ಕುಗ್ವೆಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಅರುಣ್ ಕುಗ್ವೆಯನ್ನು ಕರೆದೊಯ್ಯುತ್ತಿರುವ ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು
ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ ಒಡ್ಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈಗ ಬೇರೊಬ್ಬ ಯುವತಿ ಜೊತೆಗೆ ಅರುಣ್ ಕುಗ್ವೆ ಮದುವೆ ನಿಶ್ಚಿಯವಾಗಿತ್ತು. ಇನ್ನು ಎರಡು ದಿನದಲ್ಲಿ ಆತ ಹಸೆಮಣೆ ಏರುವ ವಿಚಾರ ತಿಳಿದು ಯುವತಿ ದೂರು ನೀಡಿದ್ದಾಳೆ.
ಅರುಣ್ ಕುಗ್ವೆ ವಿರುದ್ಧ ಇದೇ ಪ್ರಕರಣ ಸಂಬಂಧ ಈ ಹಿಂದೆ ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಆದರೆ ಕಾರಣಾಂತರದಿಂದ ಪ್ರಕರಣ ದಾಖಲಾಗಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಂದಿನಿ ಹಾಲಿನ ವಾಹನಕ್ಕೆ 25 ಸಾವಿರ ದಂಡ, ಕಾರಣವೇನು?
