ಕಾರು ಅಪಘಾತ, ಚಾಲಕ ಸ್ಥಳದಲ್ಲೇ ಸಾವು, ಹತ್ತು ಮಹಿಳೆಯರಿಗೆ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ‌ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ.
ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ.

ಹೇಗಾಯ್ತು ಅಪಘಾತ?

ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್‌ಗೆ ಬಿಡಲು ಕಾರು ತೆರಳುತ್ತಿತ್ತು‌‌. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು ನಿಂತಿದ್ದ ಮಹಿಳೆಯರಿಗೆ ಕಾರು ಡಿಕ್ಕಿಯಾಗಿದೆ.

ಕಾರು ಚಾಲಕ ಸಾವು

ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸುರೇಶ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVT JULY NANJAPPA HOSPITAL HOME LAB TESTING

ಆಸ್ಪತ್ರೆಗೆ ಶಾಸಕ ಹಾಲಪ್ಪ

ಗಾಯಗೊಂಡ ಮಹಿಳೆಯರನ್ನು ಸಾಗರದ ಕಾರಿನಲ್ಲಿದ್ದ ಐವರು ಮಹಿಳೆಯರು ಮತ್ತು ರಸ್ತೆಯಲ್ಲಿ ನಿಂತಿದ್ದ ಐವರು ಮಹಿಳೆಯರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment