ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JUNE 2024
SAGARA : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಾಗರ ಪೊಲೀಸರು ದಾಳಿ (Raid) ನಡೆಸಿ ಮಾಲು ಸಹಿತ ಮೂವರನ್ನು ಬಂಧಿಸಿದ್ದಾರೆ. ಸಾಗರ ಪಟ್ಟಣದ ಎಳ್ಳಾರೆ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ರಾಘವೇಂದ್ರ, ಹೊಸೂರು ಮರಾಠಿ ಗ್ರಾಮದ ರಮೇಶ್, ಕದರೂರು ಗ್ರಾಮದ ಪ್ರವೀಣ್ ಬಂಧಿತರು. ಇವರಿಂದ 23 ಸಾವಿರ ರೂ. ಮೌಲ್ಯದ 790 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ.ನಾಯಕ್, ಇನ್ಸ್‌ಪೆಕ್ಟರ್ ಸೀತಾರಾಂ, ಪಿಎಸ್‌ಐ ನಾಗರಾಜ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಕುಸಿತ, ಅಚ್ಚುಕಟ್ಟು ಭಾಗದ ರೈತರಲ್ಲಿ ಆತಂಕ, ಇವತ್ತು ಎಷ್ಟಿದೆ ನೀರಿನ ಮಟ್ಟ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





