ಶಿವಮೊಗ್ಗದ ಪುರಲೆ ಕೆರೆಯಲ್ಲಿ ಸಕಲೇಶಪುರದ ಯುವಕನ ಮೃತದೇಹ

ಶಿವಮೊಗ್ಗ: ನಗರದ ಹೊರವಲಯದ ಪುರಲೆ ಕೆರೆಯಲ್ಲಿ ಸೋಮವಾರ ಬೆಳಗ್ಗೆ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಯುವಕನ ಶವ ನೀರಿನಲ್ಲಿ ತೇಲುತ್ತಿದ್ದ ಹಿನ್ನೆಲೆ ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಮೃತನನ್ನು ಸಕಲೇಶಪುರ ಮೂಲದ ಸಂಕೇತ್ (19) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಐಟಿಐ ವ್ಯಾಸಂಗ ಮುಗಿಸಿದ್ದರು. ವಯಕ್ತಿಕ ಕಾರಣಕ್ಕೆ ಮನಸ್ತಾಪಗೊಂಡಿದ್ದರು ಎನ್ನಲಾಗುತ್ತಿದೆ. ಕಳೆದ ಶುಕ್ರವಾರ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಂಕೇತ್ ಅಂದಿನಿಂದಲೇ ನಾಪತ್ತೆಯಾಗಿದ್ದ.

Sakaleshpura-Youth-found-in-Purle-lake-in-Shimoga-city

ಆತನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈಗ ಪುರಲೆ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.