ಹೊಸನಗರ: ಬಹುಮಾನದ ಸ್ಕೀಮ್ ಯೋಜನೆಯಡಿ ಗ್ರಾಹಕರಿಗೆ ಅಂದಾಜು ₹3 ಕೋಟಿ ಮೋಸ (scam) ಮಾಡಿದ ಪ್ರಕರಣ ಸಂಬಂಧ ಉಡುಪಿ ಮೂಲದ ಒಬ್ಬನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಜಾಕ್ ಬಂಧಿತ ಆರೋಪಿ. ಪಟ್ಟಣದ ನಿವಾಸಿ ನಿಹಾಲ್ ಎಂಬುವವರು ಇಲ್ಲಿನ ಠಾಣೆಗೆ ದೂರು ನೀಡಿದ್ದರು.
ಏನಿದು ಸ್ಕೀಮ್?
ಅಯಾನ್ ಗ್ರೂಪ್ ಎಂಬ ಸಂಸ್ಥೆಯ ಮಾಲೀಕರಾಗಿರುವ ಅಬ್ದುಲ್ ರಜಾಕ್ ಮತ್ತು ಶೇಖ್ ಮಹಮದ್ ಫಜಲ್ ಎಂಬುವವರು ತಮಗೆ 2023ರಲ್ಲಿ ಪರಿಚಯವಾಗಿದ್ದರು. ತಮ್ಮ ಸಂಸ್ಥೆಯಲ್ಲಿ ಕೆಲ ತಿಂಗಳುಗಳಿಗೆ ಹಣ ಕಟ್ಟಿದಲ್ಲಿ ಕೊನೆಯಲ್ಲಿ ಉತ್ತಮ ಬಹುಮಾನ ದೊರೆಲಿದೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದರು.
ತಾವು ತಮ್ಮ ಗ್ರಾಹಕರಿಂದ ಹಣ ಕಟ್ಟಿಸಿದ್ದು ಒಟ್ಟು ₹24 ಲಕ್ಷ ಸಂದಾಯ ಮಾಡಲಾಗಿದೆ. ಸ್ಕೀಮ್ ಅವಧಿ ಮುಗಿದ ಬಳಿಕವೂ ಹಣ ನೀಡಿರುವುದಿಲ್ಲ. ಸಂಸ್ಥೆಯ ಕಚೇರಿಯನ್ನು ಮುಚ್ಚಲಾಗಿದೆ. ಇದೇ ರೀತಿ ಸುಮಾರು 1900ಕ್ಕೂ ಹೆಚ್ಚು ಮಂದಿಗೆ ಹಣ ನೀಡಬೇಕಾಗಿದ್ದು ಒಟ್ಟು ಅಂದಾಜು ₹3 ಕೋಟಿ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ