ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ಶಾಲಾ ಬಸ್ (school bus) ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವವರ ಪುತ್ರ ಆರ್ಯನ್ (1 ವರ್ಷ 6 ತಿಂಗಳು) ಮೃತ ಮಗು. ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಮಂಜುನಾಥ್ ಅವರ ಎರಡನೇ ಮಗ ಆರುಷ್ ಖಾಸಗಿ ಶಾಲೆಯೊಂದರಲ್ಲಿ ಎಲ್‌ಕೆಜಿ ಓದುತ್ತಿದ್ದು, ಮಧ್ಯಾಹ್ನ ಶಾಲಾ ಬಸ್‌ನಲ್ಲಿ ಮನೆಗೆ ಮರಳಿದ್ದನು.
ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್ಸಿನ ಬಳಿ ಹೋಗಿದ್ದರು. ಈ ವೇಳೆ ಅವರ ಹಿಂದೆಯೇ ಮಗು ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸಿಕೊಳ್ಳುತ್ತಿದ್ದ ಸಂದರ್ಭ, ಮಗು ಆರ್ಯನ್ ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದನು. ಇದನ್ನು ಗಮನಿಸದ ಬಸ್ ಚಾಲಕ ಉಮೇಶ್, ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿದ ಪರಿಣಾಮ ಮಗುವಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್
ಅಪಘಾತದಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಗಾಯವಾಗಿತ್ತು. ಕೂಡಲೇ ಮಗುವನ್ನು ಅದೇ ಶಾಲಾ ಬಸ್‌ನಲ್ಲಿ ಸರ್ಜಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಸಂಬಂಧ ಮಗುವಿನ ತಂದೆ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು















