SHIVAMOGGA LIVE NEWS, 28 JANUARY 2025
ಶಿವಮೊಗ್ಗ : ಖಾಸಗಿ ಶಾಲೆಯ ಬಸ್ (School bus) ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.
ಬಾಪೂಜಿನಗರ ನಿವಾಸಿ ಕೆಂಪಮ್ಮ ಮೃತರು. ಸರ್ಕಲ್‌ನಲ್ಲ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕೆಂಪಮ್ಮ ಅವರು ಸೊಪ್ಪು ಮಾರಾಟ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದರು.
ಪೂರ್ವ ಸಂಚಾರ ಠಾಣೆ ಪಿಎಸ್‌ಐ ನವೀನ್ ಮಠಪತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಲಾ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು