ಶಿವಮೊಗ್ಗ ಲೈವ್.ಕಾಂ | 20 ಮೇ 2019
ಶಿವಮೊಗ್ಗ ನಗರದಲ್ಲಿ ಇವತ್ತು ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಸುಮಾರು 250 ರೌಡಿಗಳು ಇವತ್ತಿನ ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಫೈಲ್ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಖಡಕ್ ವಾರ್ನಿಂಗ್ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿಎಆರ್ ಮೈದಾನದಲ್ಲಿ ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು.
ಮೇ 13ರಂದು ಮೊದಲ ಹಂತದ ರೌಡಿಗಳ ಪರೇಡ್ ನಡದಿತ್ತು. 300 ರೌಡಿಗಳು ಅವತ್ತು ಪರೇಡ್’ನಲ್ಲಿ ಭಾಗವಹಿಸಿದ್ದರು. ಈ ವೇಳೆ ಶಿವಮೊಗ್ಗ ಪ್ರಮುಖ ರೌಡಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ವಾರ್ನಿಂಗ್ ನೀಡಿದ್ದರು.
ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್, ಡಿವೈಎಸ್’ಪಿ ಈಶ್ವರ್ ನಾಯಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]