ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳೆದ ಎರಡು ದಿನದಿಂದ ಶಿವಮೊಗ್ಗ ನಗರದಲ್ಲಿ ವಿವಾದ ಭುಗಿಲೆದ್ದಿದ್ದು, ಇವತ್ತು ತಾರಕಕ್ಕೇರಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಎರಡು ದಿನ ಸಿಆರ್’ಪಿಸಿ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಫೆಬ್ರವರಿ 8 ಮತ್ತು 9ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.