ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021
ಗಾಜನೂರಿನ ತುಂಗಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿ ಬಿದ್ದು, ಯುವಕನೊಬ್ಬ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
ವಿನಾಯಕ (22), ಮೃತ ದುರ್ದೈವಿ. ಇವತ್ತು ಕುಟುಂಬದವರ ಜೊತೆಗೆ ವಿನಾಯಕ ಗಾಜನೂರಿಗೆ ಆಗಮಿಸಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳುತ್ತಿದ್ದಾಗ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾನೆ. ಈಜಲು ಸಾಧ್ಯವಾಗದೆ ಮುಳುಗಿದ್ದಾನೆ. ಮೃತ ವಿನಾಯಕ, ಶಿವಮೊಗ್ಗದ ವಿನಾಯಕ ನಗರ ನಿವಾಸಿ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ
ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ವಿನಾಯಕನ ಮೃತದೇಹ ಪತ್ತೆಯಾಗಿದೆ. ಡಿಎಫ್‍ಒ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್, ಎಫ್‍ಎಸ್‍ಒ ಹುಲಿಯಪ್ಪ, ಲೀಡಿಂಗ್ ಫೈರ್ ಮ್ಯಾನ್ ಸುನಿಲ್, ಸತೀಶ್, ಅರುಣ್, ಶಿವಕುಮಾರ್, ಪ್ರಭು ಮತ್ತು ತುಂಗಾ ನಗರ ಠಾಣೆ ಪೊಲೀಸರು ಕಾರ್ಯಚರಣೆಯಲ್ಲಿ ಭಾಗಹಿಸಿದ್ದರು.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





