ಶಿವಮೊಗ್ಗದಲ್ಲಿ ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯಿಂದ ಅವಾಂತರ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Published On : ಫೆಬ್ರವರಿ 3, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 3 FEBRUARY 2024

SHIMOGA : ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯೊಬ್ಬ ಕಾರಿನಲ್ಲಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದಾರೆ. ರೊಚ್ಚಿಗೆದ್ದ ಸಾರ್ವಜನಿಕರು ಮೆಡಿಕೆಲ್‌ ವಿದ್ಯಾರ್ಥಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೊಬ್ಬ ಹೊಳೆಹೊನ್ನೂರು ರಸ್ತೆಯಲ್ಲಿ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುವಾಗ ನಾಲ್ಕೈದು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್‌ನಲ್ಲಿ ಭದ್ರಾವತಿಯ ಲೋಯರ್‌ ಹುತ್ತದ ನವೀನ್‌ ಕುಮಾರ್‌ ಮತ್ತು ಅವರ ಪತ್ನಿ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದಾರೆ.

ಅಷ್ಟು ಹೊತ್ತಿಗೆ ಮೆಡಿಕಲ್‌ ವಿದ್ಯಾರ್ಥಿಯನ್ನು ಹಿಂಬಾಲಿಸಿ ಬಂದ ಸಾರ್ವಜನಿಕರು ಆತನನ್ನು ಕಾರಿನಿಂದ ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಗೊಂಡಿದ್ದ ಮೆಡಿಕೆಲ್‌ ವಿದ್ಯಾರ್ಥಿಯನ್ನು ಪೊಲೀಸರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆತನ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಶೆಯ ಕುರಿತು ತನಿಖೆ

ಮೆಡಿಕಲ್‌ ವಿದ್ಯಾರ್ಥಿ ನಶೆಯಲ್ಲಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ ಮದ್ಯ ಸೇವಿಸಿದ್ದನೊ, ಗಾಂಜಾ ಮತ್ತಿನಲ್ಲಿದ್ದನೊ ಅನ್ನುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ – ವಾಹನ ಸವಾರರೆ ಹುಷಾರ್‌, ಮುಖ್ಯರಸ್ತೆಯ ಮಧ್ಯದಲ್ಲೇ ಬಾಯ್ತೆರೆದಿದೆ ಮ್ಯಾನ್‌ ಹೋಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 3, 2024

Leave a Comment