ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. LF Work ಎಂಬ ಕಂಪನಿಯ ಹೆಸರಿನಲ್ಲಿ ಈ ವಂಚನೆ ನಡೆದಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಪ್ರಕರಣ 1
ವ್ಯಕ್ತಿಯೊಬ್ಬರಿಗೆ ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿದ ವಂಚಕರು, LF Work ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು ₹6,99,310 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ.
ಪ್ರಕರಣ 2
ಮತ್ತೊಬ್ಬ ವ್ಯಕ್ತಿಯಿಂದ ಇದೇ ಮಾದರಿಯಲ್ಲಿ ₹3,15,909 ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ದೂರುದಾರರು ತಾವು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಆಪ್ ಕೆಲಸ ಮಾಡದ ಕಾರಣ ಮೋಸ ಹೋಗಿರುವುದು ದೃಢಪಟ್ಟಿದೆ.
ಇದನ್ನೂ ಓದಿ » ಮಾವ, ಸೊಸೆಗೆ ಖಾರದ ಪುಡಿ ಎರಚಿ, ರಾಡ್‌ನಿಂದ ಹೊಡೆದ ಕೇಸ್, ಇಬ್ಬರು ಅರೆಸ್ಟ್, ಯಾರವರು?
ಒಟ್ಟು ₹10,00,000 ವಂಚಿಸಲಾಗಿದೆ ಎಂದು ದೂರು ದಾಖಲಾಗಿದೆ. ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







