ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಕಾರ್ಯಕರ್ತನ ಮೇಲಿನ ಹಲ್ಲೆಯಿಂದಾಗಿ ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಗುವಿನ ವಾತಾವರಣವಿತ್ತು. ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ.
ಮಧ್ಯಾಹ್ನದ ವೇಳೆಗೆ ಶಿವಮೊಗ್ಗ ನಗರದಾದ್ಯಂತ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಮೆಡಿಕಲ್ ಶಾಪ್‍ಗಳು, ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆ ಒದಗಿಸುವ ಮಳಿಗೆಗಳನ್ನು ಮಾತ್ರ ತೆರೆಯಾಲಾಗಿತ್ತು. ಉಳಿದಂತೆ ಎಲ್ಲಾ ಮಳಿಗೆಗಳನ್ನು ಬಂದ್ ಮಾಡಿಸಲಾಯಿತು.
ಪೊಲೀಸರಿಂದ ಅನೌನ್ಸ್‌ಮೆಂಟ್
ಜನರು ಗುಂಪುಗೂಡುವುದು ನಿಷೇಧವಿದೆ ಎಂದು ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡಿದರು. ನಿಷೇಧಾಜ್ಞೆ ಮತ್ತು ಅಹಿತಕರ ಘಟನೆಗಳನ್ನು ತಡೆಯುವ ಸಲುವಾಗಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು.
ಶಿವಮೊಗ್ಗ ಸಿಟಿಯಲ್ಲಿ ಬಂದ್ ವಾತಾವರಣ
ನಿಷೇಧಾಜ್ಞೆ ಜಾರಿಯಾಗಿ, ಪೊಲೀಸರು ಬಂದೋಬಸ್ತ್ ಮತ್ತು ಗಸ್ತು ಹೆಚ್ಚಳ ಮಾಡುತ್ತಿದ್ದಂತೆ ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಯಿತು. ಅಂಗಡಿಗಳ ಬಾಗಿಲು ಮುಚ್ಚಿದರೆ, ಜನ ಮತ್ತು ವಾಹನ ಸಂಚಾರ ಸಂಪೂರ್ಣ ತಗ್ಗಿತು. ಸರ್ಕಾರಿ ಕಚೇರಿ ಸೇರಿದಂತೆ ಹಲವು ಕಚೇರಿಗಳು ಸಿಬ್ಬಂದಿಗಳು ಆತಂಕದಿಂದ ಬೇಗನೆ ಮನೆ ಸೇರಿದರು.
ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಪೊಲೀಸರು ಗಸ್ತು ಹೆಚ್ಚಿಸಿದ್ದು, ಅಗತ್ಯವಿದ್ದಲ್ಲಿ ನಾಕಾಬಂದಿ ಹಾಕಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422