ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹಳೆ ಶಿವಮೊಗ್ಗ ಭಾಗದಲ್ಲಿ ಬೆಳಗ್ಗೆನೂ ಕರ್ಫ್ಯೂ ಮುಂದುವರೆದಿದೆ.
ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?
ಬಿ.ಹೆಚ್.ರಸ್ತೆ | ಇಲ್ಲಿರುವ ಎಲ್ಲ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಜನ ಸಂಚಾರ ಸಂಪೂರ್ಣ ತಗ್ಗಿದೆ. ಬೆರಳೆಣಿಕೆಯಷ್ಟು ವಾಹನಗಳು ಸಂಚರಿಸುತ್ತಿವೆ. ಬಸ್ ಸೇರಿದಂತೆ ಭಾರೀ ವಾಹನಗಳಿಲ್ಲ.
ಗಾಂಧಿ ಬಜಾರ್ | ಸಂಪೂರ್ಣ ಬಂದ್ ಆಗಿದೆ. ಸ್ಥಳೀಯರ ಹೊರತು ಮತ್ಯಾರಿಗೂ ಗಾಂಧಿ ಬಜಾರ್ ಪ್ರವೇಶವಿಲ್ಲ. ಬ್ಯಾರಿಕೇಡ್ ಹಾಕಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.
ಹೂವಿನ ಮಾರುಕಟ್ಟೆ | ಹೂವು ಮಾರಾಟ ನಿಂತಿದೆ. ಯಾವ ಅಂಡಿಗಳನ್ನು ತೆಗೆದಿಲ್ಲ.
ಎ.ಎ.ಸರ್ಕಲ್ | ಸರ್ಕಲ್ ಸುತ್ತಲು ಬ್ಯಾರಿಕೇಡ್ ಹಾಕಲಾಗಿದೆ. ಬಿ.ಹೆಚ್.ರಸ್ತೆಯಲ್ಲಿ ಬರುವ ಕೆಲವು ಬೈಕು, ಕಾರುಗಳಷ್ಟೆ ಸರ್ಕಲ್ ಮೂಲಕ ಹಾದು ಹೋಗಬಹುದಾಗಿದೆ.
ನೆಹರೂ ರೋಡ್ | ಗೋಪಿ ಸರ್ಕಲ್‍ನಿಂದ ನೆಹರೂ ರೋಡ್ ಸಂಪರ್ಕ ಕಲ್ಪಿಸುವ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಲಾಗಿದೆ. ಹಾಗಾಗಿ ನೆಹರೂ ರೋಡ್‍ನಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಅಂಗಡಿಗಳು ಕೂಡ ಕ್ಲೋಸ್ ಆಗಿವೆ.
ದುರ್ಗಿಗುಡಿ | ಅಂಗಡಿಗಳು ಬಂದ್ ಆಗಿವೆ. ವಾಹನ ಸಂಚಾರವಿದೆ. ಪೊಲೀಸರನ್ನು ನಿಯೋಜಿಸಲಾಗಿದೆ.
VIDEO REPORT
ವಾಹನ ಸಂಚಾರ ಇದೆ
ನಗರದಲ್ಲಿ ವಾಹನ ಸಂಚಾರ ಸಹಜ ಸ್ಥಿತಿಯಲ್ಲಿದೆ. ಕಚೇರಿಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆ ಸಿಬ್ಬಂದಿಗಳು, ಇತರೆ ಕೆಲಸಗಳಿಗೆ ಓಡಾಡುವವರು ವಾಹನಗಳನ್ನು ಬಳಕೆ ಮಾಡುತ್ತಿದ್ದಾರೆ. ಯಾವುದೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಜನ ಸಂಚಾರವು ಸಂಪೂರ್ಣ ಕಡಿಮೆಯಾಗಿದೆ.
ಸಹಜ ಸ್ಥಿತಿಯತ್ತ ಶಿವಮೊಗ್ಗ
ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ, ಆ ಬಳಿಕ ನಡೆದ ಗಲಭೆಯಿಂದಾಗಿ ಶಿವಮೊಗ್ಗದಲ್ಲಿ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದರಿಂದ, ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಸದ್ಯ ಶಿವಮೊಗ್ಗ ಸಹಜ ಸ್ಥಿತಿಯತ್ತ ಮರಳಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]