ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 10 NOVEMBER 2024 : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 51 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (Court) ನ್ಯಾಯಾಧೀಶ ಮೋಹನ್ ಜೆ.ಎಸ್. ಆದೇಶ ನೀಡಿದ್ದಾರೆ.
ದಂಡ ಕಟ್ಟಲು ವಿಫಲವಾದರೆ 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ನು, ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 50 ಸಾವಿರ ರೂ. ಮತ್ತು ಸರ್ಕಾರದಿಂದ 2 ಲಕ್ಷ ರೂ. ಮೊತ್ತವನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರು ಸೂಚಿಸಿದ್ದಾರೆ.
ಏನಿದು ಪ್ರಕರಣ?
2023ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ 43 ವರ್ಷದ ವ್ಯಕ್ತಿಯು 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ನೀಡಿದ ದೂರಿನ ಮೇರೆಗೆ ನ್ಯೂ ಟೌನ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಸಿಪಿಐ ಶಾಂತಿನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಕೀಲ ಶ್ರೀಧರ್ ಎಚ್.ಆರ್. ವಾದ ಮಂಡಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್ ಕಾರ್ಯಾಚರಣೆ, 20 ಆಟೋಗಳು ಸೀಜ್, 100 ಕೇಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422