ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್ (Hacked) ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ₹95,000 ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಏನಿದು ಪ್ರಕರಣ?
ಶಿವಮೊಗ್ಗದ ವೈದ್ಯೆಯೊಬ್ಬರ (ಹೆಸರು ಗೌಪ್ಯ) ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು ಬಾರಿ ಒಟ್ಟು ₹95,000 ಹಣ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ವಲ್ಪ ಸಮಯದ ಬಳಿಕ ಇತರೆ ವೈದ್ಯರು ವೈದ್ಯೆಯ ವಾಟ್ಸಪ್ ನಂಬರ್ ಹ್ಯಾಕ್ ಆಗಿರುವ ವಿಷಯ ತಿಳಿಸಿದ್ದಾರೆ. ಹಣ ಕಳೆದುಕೊಂಡಿರುವ ಹಿನ್ನೆಲೆ ಸಹೋದ್ಯೋಗಿ ವೈದ್ಯ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

Shimoga doctor whatsapp Hacked
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






