ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಪಾರ್ಕಿಂಗ್ ಮಾಡಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವ ವೇಳೆ ಸಂಭವಿಸಿದ ಜಗಳದಿಂದ, ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಇವತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.
ಗಾಂಧಿ ಬಜಾರ್‍ನಲ್ಲಿ ಏನೇನಾಯ್ತು?
- ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಖಂಡಿಸಿ, ಯುವಕರು ಗಾಂಧಿ ಬಜಾರ್‍ನಲ್ಲಿ ಗುಂಪುಗೂಡಿದ್ದರು.
- ಗಾಂಧಿ ಬಜಾರ್‍ನ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ವಾಹನವನ್ನು ಹಿಂದಕ್ಕೆ ತೆಗೆಯುತ್ತಿದ್ದ ವೇಳೆ ಗಲಾಟೆಯಾಗಿದೆ.
- ಬಿಗುವಿನ ವಾತವರಣ ನಿರ್ಮಾಣವಾಗಿ, ಗಾಂಧಿ ಬಜಾರ್‍ನ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಬಟ್ಟೆ ಮಾರ್ಕೆಟ್‍ನಲ್ಲಿ ಕಿರಿಕ್
ಈ ಬೆಳವಣಿಗೆ ನಡುವೆ, ಬಟ್ಟೆ ಮಾರುಕಟ್ಟೆಯಲ್ಲಿ ಎರಡು ಗುಂಪಿನ ಯುವಕರ ನಡುವೆ ಗಲಾಟೆಯಾಯ್ತು. ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಗುಂಪು ಚದುರಿಸಲು ಯತ್ನ
ಗಲಾಟೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಯುವಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು. ಇನ್ನು, ಮಾರುಕಟ್ಟೆಗೆ ಬಂದವರು, ಅಕ್ಕಪಕ್ಕದ ಏರಿಯಾದ ಜನರು ಅಲ್ಲಿ ಸೇರಿದರು. ಪರಿಸ್ಥಿತಿ ಕೈ ಮೀರುವುದನ್ನು ತಪ್ಪಿಸಲು, ಪೊಲೀಸರು ಗುಂಪು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸಪಟ್ಟರು.
VIDEO REPORT
ಸಮಾಧನಪಡಿಸಿದ ಪೊಲೀಸರು
ಆಕ್ರೋಶಗೊಂಡಿದ್ದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಕೈಗೊಂಡರು. ಈ ನಡುವೆ ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.
ಬಜರಂಗದಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ ಪೊಲೀಸರು, ಗುಂಪು ಚದುರಿಸಿದರು. ಸದ್ಯ ಗಾಂಧಿ ಬಜಾರ್‍ನಲ್ಲಿ ಶಾಂತಿಯುತ ವಾತಾವರಣವಿದೆ. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






