ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದ ಧನುಷ್ ಎಂ. ಜಾಧವ್ ಎಂಬುವರ ಕಾರನ್ನು ಮತ್ತೊಂದು ಕಾರು ಓವರ್ಟೇಕ್ (Overtake) ಮಾಡಿ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ನವೆಂಬರ್ 25ರ ರಾತ್ರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ (Bhadravathi) ಸ್ನೇಹಿತನ ಮದುವೆ ಕಾರ್ಯಕ್ರಮ ಮುಗಿಸಿ ಧನುಷ್ ಜಾಧವ್ ಶಿವಮೊಗ್ಗಕ್ಕೆ ಬರುತ್ತಿದ್ದರು. ಬಿದಿರೆ ಜಯಲಕ್ಷ್ಮಿ ಫೂಯೆಲ್ಸ್ (Jayalaxmi Fuels) ಬಳಿ ಹೆದ್ದಾರಿಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಓವರ್ಟೇಕ್ ಮಾಡಿ ಅಡ್ಡಗಟ್ಟಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?
ಕಾರಿನಲ್ಲಿದ್ದ ಇಬ್ಬರು ಅಪರಿಚಿತರು ಧನುಷ್ಗೆ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ಮುಖಕ್ಕೆ ಗುದ್ದಿ, ತುಟಿ, ಮೈ ಕೈ ಮತ್ತು ಹೊಟ್ಟೆಗೆ ಹೊಡೆದಿದ್ದಾರೆ. ಧನುಷ್ ಅವರ ಮೊಬೈಲ್ಗು ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





