ಶಿವಮೊಗ್ಗ ಲೈವ್
SHIVAMOGGA LIVE NEWS, 15 DECEMBER 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸಾಗರ : ಅಂಗಡಿಯ (Shop) ಶಟರ್ ಮುರಿದು ಹಣ ಮತ್ತು ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಸಾಗರದ ಜೋಗ ರಸ್ತೆಯಲ್ಲಿರುವ ಮಗಿ ಏಜೆನ್ಸಿಯಲ್ಲಿ ಕಳ್ಳತನವಾಗಿದೆ.
ಮಾಲೀಕ ಅಶೋಕ್ ಅವರು ಡಿ.13ರಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ಶಟರ್ ತೆರೆದಿತ್ತು. ಪರಿಶೀಲಿಸಿದಾಗ ಕ್ಯಾಶ್ ಡ್ರಾದಲ್ಲಿರುವ 15 ರಿಂದ 20 ಸಾವಿರ ರೂ. ಹಣ ಕಳುವಾಗಿತ್ತು. ಇನ್ನು, ಸಿಸಿಟಿವಿ ಡಿವಿಆರ್ ಅನ್ನು ಕಳ್ಳರು ಕದ್ದೊಯ್ದಿದ್ದರು. ಘಟನೆ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
