BHADRAVATHI : ಆಕಸ್ಮಿಕ ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಭದ್ರಾವತಿ ಪಟ್ಟಣದ ಹಳದಮ್ಮ ಬೀದಿಯಲ್ಲಿ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವಾಸು ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಹಾನಿಯಾಗಿವೆ. ವಿಷಯ ತಿಳಿದು ಅಗ್ನಿಶಾಮಕಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ನಾವು ಕೆಲಸಕ್ಕೆ ಹೋಗಿದ್ದಾಗ ಫೋನ್ ಬಂತು. ಇಲ್ಲಿ ಬಂದಾಗ ಮನೆ ಹೊತ್ತಿ ಉರಿಯುತ್ತಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದೆವು. ಮನೆಯಲ್ಲಿರುವ ವಸ್ತುಗಳು, ಜಮೀನು ಮಾರಿದ್ದ ಹಣ, ಒಡವೆ ಎಲ್ಲವು ಸುಟ್ಟು ಹೋಗಿದೆ ಎಂದು ಮನೆ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ