ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 14 DECEMBER 2024
ಶಿವಮೊಗ್ಗ : ಮಾಲೀಕರಿಗೆ ತಿಳಿಯದೆ ಅವರ ನಿವೇಶನವನ್ನು (Site) ಬೇರೊಬ್ಬರಿಗೆ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮಹಿಳೆಯೊಬ್ಬರ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ.
ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಈಶ್ವರ್ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಜಂಟಿ ಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಬೇರೊಬ್ಬರ ಹೆಸರಿಗೆ ಪರಭಾರೆ ಮಾಡಿರುವ ಆರೋಪವಿದೆ.
ನಕಲಿ ಹೆಸರು, ಮರಣ ಪ್ರಮಾಣ ಪತ್ರ
ಮಹಾನಗರ ಪಾಲಿಕೆಯಲ್ಲಿ ಈಶ್ವರ್ ಅವರ ಪತ್ನಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಲಾಗಿದೆ. ನಿವೇಶನದ ಖಾತೆಯನ್ನು ಈಶ್ವರ್ ಎಂಬುವವರ ಹೆಸರಿನ ಮತ್ತೊಬ್ಬ ವ್ಯಕ್ತಿಗೆ ಸಿಂಗಲ್ ಖಾತೆ ಮಾಡಲಾಗಿದೆ. ನಂತರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿ ನಿವೇಶನವನ್ನು ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ನಿವೇಶನದ ನಿಜವಾದ ಮಾಲೀಕ ಈಶ್ವರ್ ದೂರು ನೀಡಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳು, ನಕಲಿ ಈಶ್ವರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ – ಮೈಸೂರು ಹೊಸ ರೈಲಿಗೆ ಬೇಡಿಕೆ ಇಟ್ಟ ಸಂಸದ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422