ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2020
ವಿಮಾನದಲ್ಲಿ ಬಂದು ಶಿವಮೊಗ್ಗದಲ್ಲಿ ಸರಗಳ್ಳತನ ಮಾಡಿದ್ದ ವ್ಯಕ್ತಿ ಸೇರಿ, ಆರು ಮಂದಿಯನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರೆಲ್ಲರು ಉತ್ತರ ಪ್ರದೇಶ ಮೂಲದವರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಯಾರಿದು ಖತರ್ನಾಕ್ ಕಳ್ಳರು?
ಶಿವಮೊಗ್ಗದಲ್ಲಿ ಕಳೆದ ತಿಂಗಳು ಸಾಲು ಸಾಲು ಸರಗಳ್ಳತನ ಪ್ರಕರಣಗಳು ವರದಿಯಾದವು. ಅದೆ ರೀತಿ ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲೂ ಸರಗಳ್ಳತನಗಳಾಗಿದ್ದವು. ಜಯನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ಸಂಭವಿಸಿದ್ದವು. ಇದರ ತನಿಖೆ ನಡೆಸಿದ ಪೊಲೀಸರು ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಇವರೆಲ್ಲ ಉತ್ತರ ಪ್ರದೇಶದ ಮೀರತ್ ಜಿಲ್ಲೆಯವರು.
VIDEO REPORT
ಬಂಧಿತರನ್ನು ಫೈಸಲ್ (25), ಸಲ್ಮಾನ್ (24), ಆಶೀಸ್ ಕುಮಾರ್ (36), ಮೆಹತಾಬ್ (35), ಸಲ್ಮಾನ್ (22). ಮಹಮ್ಮದ್ ಚಾಂದ್ (23) ಎಂದು ಗುರುತಿಸಲಾಗಿದೆ.
ವಿದ್ಯಾನಗರದಲ್ಲಿ ಸಿಕ್ಕಿಬಿದ್ದಿದ್ದರು
ಸುದ್ದಿಗೋಷ್ಠಿಯಲ್ಲಿ ಪ್ರಕರಣ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಸರಗಳ್ಳರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಈ ನಡುವೆ ದರೋಡೆಗೆ ಹೊಂಚು ಹಾಕಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ, ವಿದ್ಯಾನಗರ ಸಮೀಪ ಆರೋಪಿಗಳನ್ನು ಬಂಧಿಸಲಾಯಿತು. ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣಗಳು ಬಯಲಿಗೆ ಬಂದಿವೆ ಎಂದು ತಿಳಿಸಿದರು.
ವಿಮಾನದಲ್ಲಿ ಬಂದಿದ್ದ ಆರೋಪಿ
ಉತ್ತರ ಪ್ರದೇಶದಿಂದ ಶಿವಮೊಗ್ಗಕ್ಕೆ ಬಂದಿದ್ದ ಆರೋಪಿಗಳು ಇಲ್ಲಿನ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದರು. ಪ್ರಕರಣದ ಆರೋಪಿಗಳ ಪೈಕಿ ಒಬ್ಬಾತ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು, ಅಲ್ಲಿಂದ ಬೈಕ್ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.
ಶಿವಮೊಗ್ಗದಲ್ಲಿ ಒಬ್ಬನ ಸಹಕಾರ
ಆರೋಪಿಗಳಿಗೆ ಶಿವಮೊಗ್ಗದಲ್ಲಿ ಒಬ್ಬಾತ ಸಹಕಾರ ನೀಡಿದ್ದಾನೆ. ಮೂಲತಃ ಉತ್ತರ ಪ್ರದೇಶದ ಮೀರತ್ನ ಮಹಮ್ಮದ್ ಚಾಂದ್ ಎಂಬಾತ, ಶಿವಮೊಗ್ಗದ ಜೋಸೆಫ್ ನಗರದಲ್ಲಿ ನೆಲೆಸಿದ್ದ. ಇಲ್ಲಿ ಬೆಡ್ಶೀಟ್ ವ್ಯಾಪಾರ ಮಾಡುತ್ತಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ತಿಳಿಸಿದರು. ಈತ ಆರೋಪಿಗಳಿಗೆ ನೆರವು ನೀಡಿದ್ದ ಎಂದು ವಿಚಾರವಣೆ ವೇಳೆ ತಿಳಿದು ಬಂದಿದ್ದು, ಮಹಮ್ಮದ್ ಚಾಂದ್ನನ್ನು ಬಂಧಿಸಲಾಗಿದೆ.
2 ಪಿಸ್ತೂಲು, 12 ಜೀವಂತ ಗುಂಡು
ಬಂಧಿತರ ಬಳಿ ಎರಡು ಪಿಸ್ತೂಲುಗಳು, 12 ಜೀವಂತ ಗುಂಡು, ಒಂದು ಬೈಕ್ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕಳ್ಳತನ ಮಾಡಿದ್ದ 9.31 ಲಕ್ಷ ಮೌಲ್ಯದ 213.20 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರಿಗೆ ಬಹುಮಾನ
ಪ್ರಕರಣದ ತನಿಖೆ, ಆರೋಪಿಗಳ ಬಂಧನ ಮತ್ತು ವಿಚಾರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರಿಗೆ ನಗದು ಬಹುಮಾನ ಘೋಷಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]