SHIVAMOGGA LIVE | 28 JUNE 2023
SHIMOGA : ಇಂಜಿನಿಯರ್ ಪತ್ನಿ ಹತ್ಯೆ ಕೇಸ್‌ನ ಪ್ರಮುಖ ಆರೋಪಿ ಕಾರು ಚಾಲಕ (Car Driver) ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜೂ.17ರಂದು ಶಿವಮೊಗ್ಗದ ವಿಜಯನಗರದಲ್ಲಿ ಒಂಟಿ ಮಹಿಳೆಯ ಹತ್ಯೆ ಮಾಡಿ, 35 ಲಕ್ಷ ರೂ. ಹಣ ದೋಚಿದ್ದರು.
ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಇವತ್ತು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆಂಟ್ ಶಾಕ್, ಇಬ್ಬರು ಸ್ಥಳದಲೇ ಸಾವು
ವಿಜಯನಗರದ 2ನೇ ತಿರುವಿನಲ್ಲಿರುವ ನೀರಾವರಿ ಇಲಾಖೆ ಇಂಜಿನಿಯರ್ ಮನೆಗೆ ನುಗ್ಗಿದ್ದ ಆರೋಪಿಗಳು, ಇಂಜಿನಿಯರ್ ಪತ್ನಿ ಕಮಲಮ್ಮ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ತನಿಖೆ ನಡೆಸಿದ ತುಂಗಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಇಂಜಿನಿಯರ್ ಪತ್ನಿ ಹತ್ಯೆ ಕೇಸ್, ಮನೆಯಲ್ಲಿದ್ದ 35 ಲಕ್ಷ ರೂ. ಹಣ ಮಿಸ್ಸಿಂಗ್, ಒಬ್ಬನ ಮೇಲೆ ಅನುಮಾನ, ಯಾರದು?