ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
SHIMOGA : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ (bus) ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿದೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆಯಲ್ಲಿ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರಿಗು ಸಣ್ಣಪುಟ್ಟ ಗಾಯವಾಗಿದೆ.

ಬಸ್ ಮೇಲೆ ಬಿದ್ದ ಕರೆಂಟ್ ವಯರ್
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್ ವಯರ್ ಬಸ್ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್ ಪ್ರವಹಿಸುತ್ತಿತ್ತು. ಇದೇ ವೇಳೆ ದಾರಿಯಲ್ಲಿ ತೆರಳುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ರಕ್ಷಣೆಗೆ ಧಾವಿಸಿದ್ದರು. ವಿದ್ಯುತ್ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಅಲ್ಲದೆ ಅಪಘಾತಕ್ಕೀಡಾದ ಬಸ್ಸಿನಿಂದ ಗಾಬರಿಯಿಂದ ಇಳಿಯುತ್ತಿದ್ದ ಪ್ರಯಾಣಿಕರಿಗೆ ವಯರ್ ಬಗ್ಗೆ ಎಚ್ಚರ ವಹಿಸುವಂತೆ ಕೂಗಿ ತಿಳಿಸಿ ಹಲವರ ಪ್ರಾಣ ರಕ್ಷಿಸಿದ್ದಾರೆ.

ನೆರವಾದ ಗ್ರಾಮಸ್ಥರು
ಅಪಘಾತದ ಸದ್ದು ಕೇಳಿ ಪಿಳ್ಳಂಗೆರೆ ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತುರ್ತು ನೆರವು ನೀಡಿ, ಆಂಬುಲೆನ್ಸ್ಗೆ ಕರೆ ಮಾಡಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದಂತೆ ಆಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಆಯನೂರು ಬಳಿ ಸೇತುವೆ ಪಕ್ಕದ ಹಳ್ಳಕ್ಕೆ ಹಾರಿದ ಕಾರು, ಚಿತ್ರದುರ್ಗದಿಂದ ಬಂದವರು ಆಸ್ಪತ್ರೆಗೆ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















