ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 MAY 2024
SHIKARIPURA : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಖಾಸಗಿ ಬಸ್ ಬೆಂಗಳೂರಿನಿಂದ ಸೊರಬಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದು, ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಸೊರಬ ನಿವಾಸಿ ಜಗದೀಶ್ ಮತ್ತು ಬೈಕ್ ಸವಾರ ಷಣ್ಮುಖಪ್ಪ ಗಾಯಗೊಂಡಿದ್ದಾರೆ. ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಜಿಲ್ಲಾ ರಕ್ಷಣಾಧಿಕಾರಿ ಮೊದಲ ರಿಯಾಕ್ಷನ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





