ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಾಫ್ಟ್‌ವೇರ್ ಇಂಜಿನಿಯರ್ (Engineer) ಮೇಲೆ ಸೋಮಿನಕೊಪ್ಪ ಫ್ಲೈಓವರ್ ಅಡಿ ಹಲ್ಲೆ ನಡೆಸಲಾಗಿದೆ. ಅವರ ಕಾರಿನ ಗಾಜನ್ನು ಒಡೆಯಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಇಂಜಿನಿಯರ್ ಲೋಕೇಶ್ ಎಂಬುವವರ ಮೇಲೆ ಹಲ್ಲೆಯಾಗಿದೆ.
ಹಿಂಬಾಲಿಸಿ ಬಂದು ಅಟ್ಯಾಕ್

ನಗರದ ಕ್ಲಬ್ ಒಂದರಲ್ಲಿ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿ ಲೋಕೇಶ್ ಮತ್ತು ಅವರ ಸ್ನೇಹಿತ ಕಾರಿನಲ್ಲಿ ವಿನೋಬನಗರದ ಮನೆಗೆ ತೆರಳುತ್ತಿದ್ದರು. ಗೋಪಿ ಸರ್ಕಲ್‌ನಲ್ಲಿ ವಿಜಯೋತ್ಸವ ನಡೆಯುತ್ತಿತ್ತು. ರಸ್ತೆಯಲ್ಲಿ ಯುವಕರ ಇದ್ದಿದ್ದರಿಂದ ಅಲ್ಲಿಂದ ಹಾದು ಹೋಗುವಾಗ ಲೋಕೇಶ್ ಅವರು ಚಲಿಸುತ್ತಿದ್ದ ಕಾರು ಹಾರನ್ ಹೊಡೆದಿದ್ದರು. ಆಗ ಕೆಲವು ಯುವಕರು ಲೋಕೇಶ್ ಮತ್ತು ಅವರ ಸ್ನೇಹಿತನ ಜೊತೆಗೆ ಜಗಳವಾಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಆಪರೇಷನ್ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?
ಲೋಕೇಶ್ ಅವರ ಕಾರು ಸೋಮಿನಕೊಪ್ಪದ ಫ್ಲೈಓವರ್ ಕೆಳಗೆ ತೆರಳುವಾಗ ಇನ್ನೊಂದು ಕಾರಿನಲ್ಲಿ ಹಿಂಬಾಲಿಸಿ ಬಂದ ಯುವಕರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಲೋಕೇಶ್ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

















