ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ತಾಯಿಯ ಕಪಾಳಕ್ಕೆ ಹೊಡೆದು, ಆಕೆಯ ಕುತ್ತಿಗೆಯನ್ನು ತುಳಿದು ಮಗನೇ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ. ಈ ಸಂಬಂಧ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ವನಜಾಕ್ಷಿ (45) ಮೃತ ಮಹಿಳೆ. ಬುಳ್ಳಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ದೇವರಾಜ್ (27) ತನ್ನ ತಂದೆ ಮತ್ತು ತಾಯಿ ಜೊತೆಗೆ ಜಗಳವಾಡಿದ್ದಾನೆ. ಈ ವೇಳೆ ಸಿಟ್ಟಿಗೆದ್ದು ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಆಕೆ ಕುಸಿದು ಬೀಳುತ್ತಿದ್ದಂತೆ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದಿದ್ದಾನೆ. ಘಟನೆಯಲ್ಲಿ ವನಜಾಕ್ಷಿ ಆವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದೇವರಾಜ್’ನನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200