ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಹತ್ಯೆ ಕೇಸ್‌, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Published On : ಫೆಬ್ರವರಿ 24, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಊರಗಡೂರಿನಲ್ಲಿ ಅಪ್ರಾಪ್ತ ಬಾಲಕನೊಬ್ಬನ ಕೊಲೆಯಾಗಿದೆ. ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ಸಂಜೆ ಈ ದುರ್ಘಟನೆ ನಡೆದಿದೆ. ಗಲಾಟೆ ಬಿಡಿಸಲು ಹೋದ ಬಾಲಕನ ಎದೆಭಾಗಕ್ಕೆ ಜೋರಾಗಿ ಗುದ್ದಿದ ಪರಿಣಾಮ, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ (SP Nikhil) ತಿಳಿಸಿದ್ದಾರೆ.

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌, ಈ ಪ್ರಕರಣದಲ್ಲಿ ಭಾಗಿಯಾದವರೆಲ್ಲರೂ ಅಪ್ರಾಪ್ತರು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಕೆಲವರು ಶಾಲೆಯಿಂದ ಹೊರಗುಳಿದು ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದರು.

SP-Nikhil.B-IPS-react-to-media-about-sanketh-case-in-Shimoga.

ಸದ್ಯ ಊರಗಡೂರಿನಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದು ಬಂದೋಬಸ್ತ್ ಮಾಡಲಾಗಿದೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಮೃತನ ಕುಟುಂಬದವರ ಜೊತೆಗೆ ಮಾತನಾಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಮಾಹಿತಿ ನೀಡಿದರು.

ಇದನ್ನೂ ಓದಿ – ಊರಗಡೂರಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಹತ್ಯೆ, ಸ್ಥಳೀಯರ ಆಕ್ರೋಶ, ಆಸ್ಪತ್ರೆಗೆ ಎಂಎಲ್‌ಎ ದೌಡು

ಸೂಚನೆ: ಜುವೆನೈಲ್ ಜಸ್ಟಿಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015, ಸೆಕ್ಷನ್ 74: ಅಪರಾಧದಲ್ಲಿ ಭಾಗಿಯಾದ ಅಪ್ರಾಪ್ತರ ಹೆಸರು, ವಿಳಾಸ ಅಥವಾ ಭಾವಚಿತ್ರವನ್ನು ಮಾಧ್ಯಮಗಳಲ್ಲಿ ಬಹಿರಂಗಪಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಆದ್ದರಿಂದ ಈ ಸುದ್ದಿಯಲ್ಲಿ ಸಂತ್ರಸ್ತ ಬಾಲಕನ ಹಸರು ಹೊರತು ಉಳಿದ ವಿವರಣೆಗಳನ್ನು ಪ್ರಕಟಿಸುತ್ತಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 24, 2026

Leave a Comment