ಶಿವಮೊಗ್ಗ ಜಿಲ್ಲೆಯಲ್ಲಿ 15 ದಿನ ವಿಶೇಷ ಕಾರ್ಯಾಚರಣೆ, 41 ಮಂದಿ ವಿರುದ್ಧ ಕೇಸ್, ಕಾರಣವೇನು?

ಶಿವಮೊಗ್ಗ | ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ (GANJA ADDICTS) ಅಮಲಿನಲ್ಲಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅಮಲಿನಲ್ಲಿ ತೂರಾಡುತ್ತ ರಸ್ತೆಯಲ್ಲಿ ಓಡಾಡುತ್ತ, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 15 ದಿನ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 31 ಪ್ರಕರಣಗಳನ್ನು ದಾಖಲಿಸಿಕೊಂಡು 41 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

(GANJA ADDICTS)

ಹೇಗಿತ್ತು ಕಾರ್ಯಾಚರಣೆ?

ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ಓಡಾಡುತ್ತಿರುವವರು, ಗಲಾಟೆ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿರುವವರನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾದರೆ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದರು. ಒಂದು ವೇಳೆ ಗಾಂಜಾ ಸೇವನೆ ದೃಢವಾದರೆ ಕೂಡಲೆ ಅವರನ್ನು ಬಂಧಿಸಲಾಗುತ್ತಿತ್ತು. ಅಲ್ಲದೆ ಪ್ರಕರಣ ದಾಖಲು ಮಾಡಲಾಗುತ್ತಿತ್ತು. (GANJA ADDICTS)

ಕ್ಲಿಕ್ ಮಾಡಿ ಇದನ್ನೂ ಓದಿ ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ

ಜಿಲ್ಲೆಯಾದ್ಯಂತ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಅಮಲಿನಲ್ಲಿದ್ದವರ ಕಿಕ್ ಇಳಿಸಿದ್ದಾರೆ.

jnnce college shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Shimoga-Police-Jeep

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment