ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 JANUARY 2025
ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಏರಿಯಾ ಡಾಮಿನೇಷನ್ ಮತ್ತು ಕಾಲ್ನಡಿಗೆ ವಿಶೇಷ ಗಸ್ತು (Patrolling) ಮಾಡಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ನಗರದ ಎ.ಎ.ವೃತ್ತ, ಕಸ್ತೂರ್ ಬಾ ರಸ್ತೆ, ಉರ್ದು ಬಜಾರ್, ಬಿ.ಬಿ.ರಸ್ತೆ, ಬೈ ಪಾಸ್, ಇಮಾಮ್ ಬಡಾ, ಟಿಪ್ಪು ನಗರ, ಸಿದ್ದೇಶ್ವರ ವೃತ್ತ, ಗೋಪಿ ಶೆಟ್ಟಿ ಕೊಪ್ಪ, ಬಸವನಗುಡಿ, ಎ ಎ ಕಾಲೋನಿ, ಆಟೋ ಸ್ಟಾಂಡ್, ದುರ್ಗಿಗುಡಿ, ಬಾಲರಾಜ್ ಅರಸ್ ರಸ್ತೆ, ತಿಲಕ್ ನಗರ, ಕೋರ್ಟ್ ವೃತ್ತ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ರಾಗಿಗುಡ್ಡ, ಭದ್ರಾವತಿಯ ಶಿವಾಜಿ ವೃತ್ತ, ಅಣ್ಣಾ ನಗರ, ಬೊಮ್ಮನಕಟ್ಟೆ, ಬಿ.ಆರ್.ಪಿ, ಹೊಳೆಹೊನ್ನೂರು ಟೌನ್, ಶಿಕಾರಿಪುರ ಪಟ್ಟಣದಲ್ಲಿ ವಿಶೇಷ ಗಸ್ತು ಮಾಡಲಾಯಿತು.

ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು 12 ಲಘು ಪ್ರಕರಣ, ಕೋಟ್ಪಾ ಕಾಯ್ದೆ ಅಡಿ 7 ಪ್ರಕರಣ ದಾಖಲಿಸಲಾಗಿದೆ. ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ಆಯಾ ಭಾಗದ ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ, ಕಾರ್ಯಕ್ರಮದಲ್ಲಿ ಮಿನಿಸ್ಟರ್ ಹೇಳಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





