ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸ್ಥಾಪಿಸಲಾಗಿರುವ ವಿಶೇಷ ತಂಡ ಶರಾವತಿ ನಗರದಲ್ಲಿ ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದೆ. ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿದೆ.
ಆಕಾಶ್ (23) ಬಂಧಿತ ಯುವಕ. ಬೈಕ್ ರಿಪೇರಿ ಕೆಲಸ ಮಾಡುವ ಈತನ ಮೇಲೆ ದಾಳಿ ನಡೆಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ? ದಾಳಿಗೇನು ಕಾರಣ?
ಮಾದಕ ವಸ್ತುಗಳ ಮಾರಾಟ ತಡೆಗೆ ರಚಿಸಲಾಗಿರುವ ವಿಶೇಷ ತಂಡದ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಓವರ್ ಹೆಡ್ ಟ್ಯಾಂಕ್ ಬಳಿಕ ಆಕಾಶ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಕಾಶ್’ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಠಾಣೆಯಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ತಂಡದ ಪಿಎಸ್ಐ ಮಂಜುನಾಥ್, ಸಿಬ್ಬಂದಿ ರಮೇಶ್, ಉಮೇಶ್ ನಾಯ್ಕ, ಲಂಕೇಶ, ಬಸವಂತಪ್ಪ, ಪ್ರಕಾಶ್, ಮಂಜುನಾಥನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422