ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021
ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸ್ಥಾಪಿಸಲಾಗಿರುವ ವಿಶೇಷ ತಂಡ ಶರಾವತಿ ನಗರದಲ್ಲಿ ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದೆ. ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿದೆ.
ಆಕಾಶ್ (23) ಬಂಧಿತ ಯುವಕ. ಬೈಕ್ ರಿಪೇರಿ ಕೆಲಸ ಮಾಡುವ ಈತನ ಮೇಲೆ ದಾಳಿ ನಡೆಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ? ದಾಳಿಗೇನು ಕಾರಣ?
ಮಾದಕ ವಸ್ತುಗಳ ಮಾರಾಟ ತಡೆಗೆ ರಚಿಸಲಾಗಿರುವ ವಿಶೇಷ ತಂಡದ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಓವರ್ ಹೆಡ್ ಟ್ಯಾಂಕ್ ಬಳಿಕ ಆಕಾಶ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಕಾಶ್’ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಠಾಣೆಯಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ತಂಡದ ಪಿಎಸ್ಐ ಮಂಜುನಾಥ್, ಸಿಬ್ಬಂದಿ ರಮೇಶ್, ಉಮೇಶ್ ನಾಯ್ಕ, ಲಂಕೇಶ, ಬಸವಂತಪ್ಪ, ಪ್ರಕಾಶ್, ಮಂಜುನಾಥನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





