ಶಿವಮೊಗ್ಗ LIVE
ಶಿವಮೊಗ್ಗ: ನಗರದ ಎನ್.ಟಿ ರಸ್ತೆಯಲ್ಲಿರುವ ಅರಸು ವೆಜ್ ಹೋಟೆಲ್ ಪಕ್ಕದ ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಹೀರೊ ಸ್ಪ್ಲೆಂಡರ್ ಬೈಕ್ (Splendor bike) ಕಳ್ಳತನವಾಗಿದೆ. ಆನಂದರಾವ್ ಬಡಾವಣೆಯ ಇಮ್ರಾನ್ ಬೇಗ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ.
ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?
ಕೆಲಸದ ನಿಮಿತ್ತ ತಮ್ಮ ಬೈಕನ್ನು ಅರಸು ವೆಜ್ ಹೋಟೆಲ್ ಪಕ್ಕದ ಅಂಗಡಿಯ ಮುಂದೆ ನಿಲ್ಲಿಸಿದ್ದರು. ಸ್ನೇಹಿತನ ಬೈಕ್‌ನಲ್ಲಿ ಮಾಚೇನಹಳ್ಳಿಗೆ ಹೋಗಿದ್ದರು. ನಂತರ ರಾತ್ರಿ ವಾಪಸ್ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಳ್ಳತನವಾದ ಬೈಕ್ ₹20,000 ಮೌಲ್ಯದ ಕಪ್ಪು ಬಣ್ಣದ 2012ರ ಮಾಡೆಲ್ ಬೈಕ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






