ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೈಲೈಟ್ಸ್
ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ.

ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ವಿಕ್ರಂ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟ, ಎಲ್ಲಿ? ಏನೇನು ಹಾನಿಯಾಗಿದೆ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






