ಮಹಿಳೆಯ ಮನೆಯೊಳಗೆ ರಹಸ್ಯವಾಗಿ ಸಿಸಿಟಿವಿ ಅಳವಡಿಸಿ ಕಿರುಕುಳ

ಶಿವಮೊಗ್ಗ: ಮಹಿಳೆಯೊಬ್ಬರ ಮನೆಯೊಳಗೆ ಅತಿಕ್ರಮ ಪ್ರವೇಶಿಸಿದ ಯುವಕನೊಬ್ಬ ರಹಸ್ಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯು (ಹೆಸರು, ವಿಳಾಸ ಗೌಪ್ಯ) ತನ್ನ ಮಕ್ಕಳು ಮತ್ತು ತಾಯಿಯೊಂದಿಗೆ ಮನೆಯಲ್ಲಿ ವಾಸವಿದ್ದಾರೆ. ಮನೆಯಲ್ಲಿ ಮಹಿಳೆಯ ತಾಯಿ ಒಬ್ಬರೆ ಇದ್ದಾಗ ಯುವಕ ಅತಿಕ್ರಮ ಪ್ರವೇಶಿಸಿ ಮನೆಯೊಳಗೆ ಸಿಸಿಟಿವಿ ಕ್ಯಾಮೆರಾ ಫಿಕ್ಸ್ ಮಾಡಿ ತೆರಳಿದ್ದಾನೆ. ಅಷ್ಟೇ ಅಲ್ಲದೆ, ಮಹಿಳೆಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಪ್ರೀತಿ ಮಾಡುವಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

Police-Jeep-at-Shimoga-General-Image

ಮಹಿಳೆಯು ಆತನಿಂದ ಸಾಲ ಪಡೆದಿದ್ದು, ಅದನ್ನೇ ನೆಪ ಮಾಡಿಕೊಂಡು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.