ಶಿವಮೊಗ್ಗ ಲೈವ್.ಕಾಂ | SHIMOGA | 11 ಡಿಸೆಂಬರ್ 2019
ಸ್ಟೀಮರ್ ಸ್ಫೋಟಗೊಂಡು ನಾಲ್ವರು ಹೊಟೇಲ್ ಸಿಬ್ಬಂದಿ ಗಾಯಗೊಂಡಿದ್ದಾರೆ. ದುರ್ಗಿಗುಡಿಯ ಶುಭಂ ಹೊಟೇಲ್’ನಲ್ಲಿ ಘಟನೆ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ಟೀಮರ್ ಪ್ರೆಷರ್’ಗೆ ಸ್ಫೋಟಗೊಂಡಿದ್ದು, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಫೋಟದ ರಭಸಕ್ಕೆ ಅಡುಗೆ ಮನೆಯ ಗಾಜು ಒಡೆದಿದೆ.
ಇದರಿಂದ ಹೊಟೇಲ್’ನಲ್ಲಿ ಊಟ ಮಾಡುತ್ತಿದ್ದ ಜನರು ಆತಂಕಕ್ಕೀಡಾಗಿ ಹೊಟೇಲ್’ನಿಂದ ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ದೊಡ್ಡಮಟ್ಟದ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Steamer blast in a hotel in durgigudi. Four employees of the hotel were injured. Shimoga Doddapete police visited the spot.