ಶಿವಮೊಗ್ಗ: ಷೇರು ವ್ಯವಹಾರದಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗ ಜಿಲ್ಲೆಯ ಶಿಕ್ಷಕಿಯೊಬ್ಬರಿಗೆ (ಹೆಸರು ಗೌಪ್ಯ) ₹40.85 ಲಕ್ಷ ವಂಚಿಸಲಾಗಿದೆ (Scam).
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇನ್‌ಸ್ಟಾಗ್ರಾಂನಲ್ಲಿ ಷೇರುಗಳಲ್ಲಿ ಹೂಡಿಕೆ ಕುರಿತು ಉಚಿತ ಸಲಹೆ ಎಂಬ ಜಾಹೀರಾತು ಇತ್ತು. ಅದರ ಮೇಲೆ ಕ್ಲಿಕ್ ಮಾಡಿದಾಗ ಶಿಕ್ಷಕಿಯ ಮೊಬೈಲ್ ನಂಬರ್ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿತ್ತು. ಅಲ್ಲಿ ಹಲವರು ಷೇರಿನಲ್ಲಿ ಹೂಡಿಕೆ ಮಾಡಿದ ಲಾಭ ಗಳಿಸಿರುವ ಕುರಿತು ಮಾಹಿತಿ ಹಂಚಿಕೊಳ್ಳುತ್ತಿದ್ದರು. ಈ ಹಿನ್ನೆಲೆ ಶಿಕ್ಷಕಿಯು ವಾಟ್ಸಪ್ ಗ್ರೂಪ್‌ನ ಅಡ್ಮಿನ್‌ಗೆ ಮೆಸೇಜ್ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಿಂಕ್ ಒಂದನ್ನು ಕಳುಹಿಸಿದ್ದ ಅಡ್ಮಿನ್ ಪ್ರತಿಷ್ಠಿತ ಬ್ರೋಕರೇಜ್ ಸಂಸ್ಥೆಯ ಹೆಸರಿನಲ್ಲಿ ಅಕೌಂಟ್ ತೆರೆಯುವುದಾಗಿ ನಂಬಿಸಿದ್ದ. ಅಲ್ಲದೆ ಹಲವು ಷೇರುಗಳ ಮೇಲೆ ಹೂಡಿಕೆ ಮಾಡುವಂತೆ ತಿಳಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದ ಎಂದು ಆರೋಪಿಸಲಾಗಿದೆ. ಅಂತೆಯೇ ಶಿಕ್ಷಕಿ ಹಣ ವರ್ಗಾಯಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ 39 ದ್ವಿಚಕ್ರ ವಾಹನಗಳು ಬಹಿರಂಗ ಹರಾಜು
ಕೊನೆಗೆ ಲಾಭಾಂಶ ನೀಡದೆ, ಅಸಲು ಹಣವನ್ನು ಹಿಂತಿರುಗಿಸದೆ ವಂಚಿಸಲಾಗಿದೆ. ಈ ಹಿನ್ನೆಲೆ ಶಿವಮೊಗ್ಗದ ಸಿ.ಇ.ಎನ್ ಠಾಣೆಗೆ ಶಿಕ್ಷಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







