ರಾತ್ರಿ ಮನೆ ಹೊರಗೆ ಕೇಳಿತು ಜೋರು ಶಬ್ದ, ಬಾಗಿಲು ತೆಗೆದ ಮಾಲೀಕನತ್ತ ತೂರಿಬಂತು ಇಟ್ಟಿಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ ಭುಜದ ಮೇಲೆ ಬಿದ್ದಿದೆ. ಕೂಡಲೆ ಮೊಮ್ಮಗನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಪೊಲೀಸ್‌ ಠಾಣೆಗೆ ದೂರು ನೀಡಲು ಮೊಮ್ಮಗನೊಂದಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಪುನಃ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್‌ ಪಾರಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ರಾಮಣ್ಣ ಅವರಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇒ ಶಿವಮೊಗ್ಗದ ಸರ್ಕಾರಿ ಕಚೇರಿಗಳು ಜಗಮಗ, ಸಿಟಿ ಸೆಂಟರ್‌ನಲ್ಲಿ ತ್ರಿವರ್ಣ ಅಲಂಕಾರ, ಎಲ್ಲೆಲ್ಲು ಸ್ವಾತಂತ್ರ್ಯ ಸಂಭ್ರಮ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment