ಪ್ರೀತಿಸುವಂತೆ ಯುವಕನಿಂದ ಬೆದರಿಕೆ, ವಿಷ ಕುಡಿದಿದ್ದ ಬಾಲಕಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 JUNE 2021

ವಿಷ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನೊಬ್ಬ ಪ್ರೀತಿಸುವಂತೆ ಬೆದರಿಕೆ ಹಾಕಿದ್ದೆ ಈ ಕೃತ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಹೊಸನಗರ ತಾಲೂಕು ಕನ್ನಳ್ಳಿ ಸುಧಾಕರ್ ಅವರ ಪುತ್ರಿ ಸಹನಾ (17) ಆತ್ಮಹತ್ಯೆ ಮಾಡಿಕೊಂಡಾಕೆ. ಮೇ 3ರಂದು ಸಹನಾ ವಿಷ ಸೇವಿಸಿದ್ದಳು. ಕೂಡಲೆ ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಹೊಸನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹನಾ ಕೊನೆಯುಸಿರೆಳೆದಿದ್ದಾಳೆ.

ಯುವಕನ ವಿರುದ್ಧ ದೂರು

ಕರಿಮನೆ ಗ್ರಾಮದ ಪ್ರಶಾಂತ್ ಎಂಬಾತ ಸಹನಾಳನ್ನು ಪ್ರೀತಿಸುವಂತೆ ಬೆದರಿಕೆ ಹಾಕಿದ್ದ.  ಈ ಸಂಬಂಧ ಪ್ರಶಾಂತ್ ಮತ್ತು ಅವರ ಕುಟುಂಬದವರ ತಿಳಿವಳಿಕೆ ಹೇಳಲಾಗಿತ್ತು. ಹಾಗಿದ್ದೂ ಪ್ರಶಾಂತ್ ಒತ್ತಡ ಮುಂದುವರೆಸಿದ್ದ. ಇದರಿಂದ ಮನನೊಂದು ಸಹನಾ ವಿಷ ಸೇವಿಸಿದ್ದಾಳೆ ಎಂದು ಆಕೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment