ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 JUNE 2021
ವಿಷ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನೊಬ್ಬ ಪ್ರೀತಿಸುವಂತೆ ಬೆದರಿಕೆ ಹಾಕಿದ್ದೆ ಈ ಕೃತ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ತಾಲೂಕು ಕನ್ನಳ್ಳಿ ಸುಧಾಕರ್ ಅವರ ಪುತ್ರಿ ಸಹನಾ (17) ಆತ್ಮಹತ್ಯೆ ಮಾಡಿಕೊಂಡಾಕೆ. ಮೇ 3ರಂದು ಸಹನಾ ವಿಷ ಸೇವಿಸಿದ್ದಳು. ಕೂಡಲೆ ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಹೊಸನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹನಾ ಕೊನೆಯುಸಿರೆಳೆದಿದ್ದಾಳೆ.
ಯುವಕನ ವಿರುದ್ಧ ದೂರು
ಕರಿಮನೆ ಗ್ರಾಮದ ಪ್ರಶಾಂತ್ ಎಂಬಾತ ಸಹನಾಳನ್ನು ಪ್ರೀತಿಸುವಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಶಾಂತ್ ಮತ್ತು ಅವರ ಕುಟುಂಬದವರ ತಿಳಿವಳಿಕೆ ಹೇಳಲಾಗಿತ್ತು. ಹಾಗಿದ್ದೂ ಪ್ರಶಾಂತ್ ಒತ್ತಡ ಮುಂದುವರೆಸಿದ್ದ. ಇದರಿಂದ ಮನನೊಂದು ಸಹನಾ ವಿಷ ಸೇವಿಸಿದ್ದಾಳೆ ಎಂದು ಆಕೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]