ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯಲ್ಲೇ ಕುಳಿತು ಕೆಲಸ ಮಾಡುವ ಆಮಿಷಕ್ಕೆ ಒಳಗಾದ ನಗರದ ವಿದ್ಯಾರ್ಥಿನಿಯೊಬ್ಬರು (student) ₹2,12,340 ಹಣ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ.
ವಿದ್ಯಾರ್ಥಿನಿಯು ಇನ್‌ಸ್ಟಾಗ್ರಾಮ್‌ನಲ್ಲಿ ವರ್ಕ್ ಫ್ರಮ್ ಹೋಮ್ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದರು. ನಂತರ ಟೆಲಿಗ್ರಾಮ್ ಮೂಲಕ ಸಂಪರ್ಕಿಸಿದ ವಂಚಕರು, ಹೋಟೆಲ್ ಮತ್ತು ಆಪ್‌ಗಳಿಗೆ ರಿವ್ಯೂ ನೀಡುವ ಟಾಸ್ಕ್ ನೀಡಿದ್ದರು. ಆರಂಭದಲ್ಲಿ ಸಣ್ಣ ಮೊತ್ತದ ಹಣವನ್ನು ಕಟ್ಟಿಸಿಕಂಡು ಟಾಸ್ಕ್ ನೀಡಿ ಬಳಿಕ ವಿದ್ಯಾರ್ಥಿನಿ ಕಟ್ಟಿದ್ದ ಹಣಕ್ಕಿಂತಲು ಹೆಚ್ಚಿಗೆ ಹಣವನ್ನು ಅವರ ಖಾತೆಗೆ ಜಮೆ ಮಾಡುವ ಮೂಲಕ ನಂಬಿಕೆ ಹುಟ್ಟಿಸಿದ್ದರು. ಇದನ್ನು ನಂಬಿದ ವಿದ್ಯಾರ್ಥಿನಿ ಹೆಚ್ಚಿನ ಲಾಭಾಂಶದ ಆಸೆಗಾಗಿ ಹಂತ ಹಂತವಾಗಿ ಹೆಚ್ಚುವರಿ ಹಣ ಹೂಡಿಕೆ ಮಾಡಿದ್ದಾರೆ.

ಹೆಚ್ಚಿನ ಲಾಭದ ಆಮಿಷವೊಡ್ಡಿ ಆರೋಪಿಗಳು ವಿದ್ಯಾರ್ಥಿನಿಯಿಂದ ಒಟ್ಟು ₹2,12,340 ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ. ನಂತರ ಹಣ ವಾಪಸ್ ನೀಡದೆ ಸತಾಯಿಸಿದಾಗ ತಾನು ವಂಚನೆಗೊಳಗಾಗಿರುವುದು ವಿದ್ಯಾರ್ಥಿನಿಗೆ ತಿಳಿದುಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯ ಖಾಸಗಿ ಫೋಟೊ ಅಪ್‌ಲೋಡ್, ಡಿಲೀಟ್ ಮಾಡಲು ಹಣಕ್ಕೆ ಡಿಮಾಂಡ್

LATEST NEWS
- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

- ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

- ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು










