ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲಿನ ಶೌಚಾಲಯದಲ್ಲಿ ಶಿಕ್ಷಾ ಬಂಧಿ ಕೈದಿ ನೇಣು ಬಿಗಿದುಕೊಂಡಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಜುನಾಥ್ (33), ತುಂಗಾ ವಿಭಾಗದ ಕೊಠಡಿಯಲ್ಲಿನ ಶೌಚಾಲಯದಲ್ಲಿ, ತನ್ನ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಜೈಲು ಆರೋಗ್ಯಾಧಿಕಾರಿ ಅವರು ಪರಿಶೀಲಿಸಿ, ಕೂಡಲೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ದರು.
ಆಸ್ಪತ್ರೆಗೆ ಬರುವ ವೇಳಗೆ ಮಂಜುನಾಥ್ ಸಾವನ್ನಪ್ಪಿದ್ದಾನೆ. ಮಂಜುನಾಥ್ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ವಹಿಸಲಾಗಿದೆ. ಪ್ರಕರಣವೊಂದರಲ್ಲಿ ಮಂಜುನಾಥ್‍ಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]