SHIVAMOGGA LIVE NEWS | 15 ಮಾರ್ಚ್ 2022
ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥಪುರ ಗ್ರಾಮದಲ್ಲಿ ಇವತ್ತು ಮಧ್ಯಾಹ್ನ ಘಟನೆ ಸಂಭವಿಸಿದೆ.
ಭಾರಿ ಶಬ್ದಕ್ಕೆ ಬೆಚ್ಚಿಬಿದ್ದರು
ಮಧ್ಯಾಹ್ನ 3.30ರ ಹೊತ್ತಿಗೆ ರಂಗನಾಥಪುರ ಗ್ರಾಮದಲ್ಲಿ ಸ್ಪೋಟದ ಶಬ್ದ ಕೇಳಿದೆ. ಭಾರಿ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಈ ವೇಳೆ ರಂಗನಾಥಪುರ ಗ್ರಾಮದ ವಳ್ಳೂರುಮದಿ ಅವರ ಮನೆ ಸಂಪೂರ್ಣ ಸುಟ್ಟು ಹೋಗಿದೆ.
ಅದೃಷ್ಟವಶಾತ್ ಉಳಿಯಿತು ಪ್ರಾಣ
ವಳ್ಳೂರ ಮದಿ ಎಂಬುವವರ ಮನೆಯಲ್ಲಿ ಮೂವರು ವಾಸವಾಗಿದ್ದಾರೆ. ಘಟನೆ ಸಂಭವಿಸಿದ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ. ವಳ್ಳೂರು ಮದಿ ಮತ್ತು ಅವರ ಮಗಳು ಕೆಲಸಕ್ಕೆ ತೆರಳಿದ್ದರು. ಸಣ್ಣ ಮಗ ಸ್ವಲ್ಪ ಹೊತ್ತಿಗೆ ಮುಂಚೆ ಮನೆಯಿಂದ ಹೊರಗೆ ಹೋಗಿದ್ದ. ಇನ್ನು, ಅಕ್ಕಪಕ್ಕದ ಮನೆಗಳು ಸ್ವಲ್ಪ ದೂರ ದೂರದಲ್ಲಿ ಇರುವುದರಿಂದ ಪ್ರಾಣ ಹಾನಿ ತಪ್ಪಿದಂತಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡು
ಬೆಂಕಿ ಹೊತ್ತುಕೊಂಡ ವಿಚಾರ ತಿಳಿಯುತ್ತಿದ್ದ ಹಾಗೆ ಭದ್ರಾವತಿಯ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಪಕ್ಕದ ತೆಂಗಿನ ಮರದ ಮೇಲೂ ಬೆಂಕಿ ಕಾಣಿಸಿಕೊಂಡಿದೆ.
ಚಿನ್ನಾಭರಣ, ವಸ್ತುಗಳೆಲ್ಲವು ಭಸ್ಮ
ಮನೆಯಲ್ಲಿದ್ದ ವಸ್ತುಗಳೆಲ್ಲವೂ ಬೆಂಕಿಗೆ ಆಹುತಿ ಆಗಿದೆ. ಮಗಳ ಮದುವೆ ಸಮಾರಂಭಕ್ಕೆ ತಂದಿದ್ದ ಚಿನ್ನಾಭರಣ, ಹಣ ಸೇರಿದಂತೆ ಮನೆಯಲ್ಲಿ ಪಾತ್ರೆಗಳು ಸೇರಿದಂತೆ ಎಲ್ಲವೂ ಸುಟ್ಟು ಭಸ್ಮವಾಗಿವೆ. ಘಟನೆಯ ಭೀಕರತೆ ಮತ್ತು ಎಲ್ಲವನ್ನೂ ಕಳೆದುಕೊಂಡು ವಳ್ಳೂರು ಮದಿ ಅವರ ಕುಟುಂಬದವರು ಕಣ್ಣೀರು ಹಾಕುತ್ತಿದ್ದಾರೆ. ಇವರ ಆಕ್ರಂದನ ಮುಗಿಲು ಮುಟ್ಟಿದೆ.
ಸಿಲಿಂಡರ್ ಸ್ಪೋಟ ಶಂಕೆ
ಸಿಲಿಂಡರ್ ಸ್ಪೋಟವೆ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200